ಬಿಜೆಪಿ ಕಾರ್ಯಕಾರಿಣಿ ಸಭೆಯ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಇತ್ತೀಚೆಗೆ ಧರ್ಮಸ್ಥಳದಲ್ಲಿ ಸಚಿವ ಬೈರತಿ ಬಸವರಾಜ್ ನೇತೃತ್ವದಲ್ಲಿ ಬಿಜೆಪಿ ಸೇರಿದ್ದ ಚಂದನ್ ಕಾಮತ್, ಮಡಂತ್ಯಾರಿನ ಕಾಂಗ್ರೆಸ್ ಮುಖಂಡ ಪುಷ್ಪರಾಜ ಹೆಗ್ಡೆ, ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸುಧಾಕರ್ ಲಾಯಿಲ, ಮುಂಡಾಜೆ ಪಂಚಾಯತ್ ಮಾಜಿ ಸದಸ್ಯೆ, ಕಾಂಗ್ರೆಸ್ ನಾಯಕಿ ಅಶ್ವಿನಿ ಹೆಬ್ಬಾರ್ , ರಾಜೇಶ್ವರಿ ಕುಕ್ಕಳ, ಸತೀಶ್ ಮಡಿವಾಳ ವೇಣೂರು, ಧರ್ಮಸ್ಥಳ ಗ್ರಾ.ಪಂ ಸದಸ್ಯೆ ಗಾಯತ್ರಿ, ಗ್ರಾ.ಪಂ. ಅಂತೋನಿ, ನಂದಾ ಭಟ್ ಕನ್ಯಾಡಿ, ವಿಠಲ ಗೌಡ ಕೊಕ್ಕಡ, ಕೇಶವ ಮೊಗ್ರು, ಜನಾರ್ದನ್ ಆಚಾರ್ಯ ಉಜಿರೆ, ಆನಂದ ಶೆಟ್ಟಿ ಆರಂಬೋಡಿ, ಸೆಬಾಸ್ಟಿಯನ್ ಮಾಜಿ ಯೋಧ, ಸುಂದರಿ ಕಲ್ಮಂಜ ಬಿಜೆಪಿ ಕಾರ್ಯಕಾರಿಣಿ ಸಭೆಯ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ಚಾಳ್, ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಅರಸಮಜಲು, ಜಿಲ್ಲಾ ಘಟಕದ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮಂಡಲದ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್ ಮತ್ತು ಗಣೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.