ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ..! ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ..! ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.

ಬುಧವಾರ ರಾತ್ರಿ ಸುಮಾರು 10:30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್(20), ಆನಂದ ಬಾಬು(29), ಅನಿಲ್ ಕುಮಾರ್(28) ತಿಳಿದು ಬಂದಿದೆ.

ಧರ್ಮಸ್ಥಳ ಬಳಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಮೂವರು ಊರಿಂದ ವಾಪಾಸ್ ಬೈಕ್ ನಲ್ಲಿ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!