ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › "ಜಿಲ್ಲೆಯ ಐವರೂ ಶಾಸಕರ ಮರ್ಯಾದೆಯನ್ನು ಹರಾಜು ಹಾಕುತ್ತೇವೆ...!" : ಶಾಸಕರುಗಳು ಮೇಸ್ತ ಸಾವಿನ ಫಲಾನುಭವಿಗಳು..!" ಪ್ರಮೋದ್ ಮುತಾಲಿಕ್ ಕಿಡಿ..!

"ಜಿಲ್ಲೆಯ ಐವರೂ ಶಾಸಕರ ಮರ್ಯಾದೆಯನ್ನು ಹರಾಜು ಹಾಕುತ್ತೇವೆ...!" : ಶಾಸಕರುಗಳು ಮೇಸ್ತ ಸಾವಿನ ಫಲಾನುಭವಿಗಳು..!" ಪ್ರಮೋದ್ ಮುತಾಲಿಕ್ ಕಿಡಿ..!

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣವನ್ನು ತಕ್ಷಣ ಮುಖ್ಯಮಂತ್ರಿಗಳು ಮರುತನಿಖೆಗೆ ಒಪ್ಪಿಸಬೇಕು. ಇಲ್ಲದಿದ್ದರೆ ಜಿಲ್ಲೆಯ ಐವರೂ ಬಿಜೆಪಿ ಶಾಸಕರ ಮನೆಯೆದುರು ಶ್ರೀರಾಮಸೇನೆ ಕಾರ್ಯಕರ್ತರು ಧರಣಿ ನಡೆಸಿ ಮರ್ಯಾದೆ ಹರಾಜು ಹಾಕುತ್ತೇವೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಡಿ.18 ರಂದು ಹೊನ್ನಾವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗೆ ಮಾನವೀಯತೆ ಕಿಂಚಿತ್ತಾದರೂ ಇದ್ದರೆ ಮುಖ್ಯಮಂತ್ರಿಗಳು ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು. ಸಿದ್ದರಾಮಯ್ಯ, ಆಗಿನ ಜಿಲ್ಲಾಧಿಕಾರಿ ಹಾಗೂ ಪೋಸ್ಟಮಾರ್ಟ್ಂ ಮಾಡಿದ ಮಣಿಪಾಲದ ವೈದ್ಯರನ್ನು ಪ್ರತಿವಾದಿ ಮಾಡಬೇಕು. ಪರೇಶ ಮೇಸ್ತ ನಿಗೂಢವಾಗಿ ಸಾವನ್ನಪ್ಪಿ ಐದು ವರ್ಷ ಕಳೆದಿವೆ. ಆವತ್ತಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರಕಾರ ಪ್ರಕರಣವನ್ನು ಮುಚ್ಚಿ ಹಾಕಲು ಏನು ಬೇಕೋ ಅದನ್ನೆಲ್ಲ ವ್ಯವಸ್ಥಿತವಾಗಿ ಮಾಡಿದ್ದಾರೆ. ಅವನ ಸಾವಿಗೆ ಬಿಜೆಪಿ ನ್ಯಾಯ ಒದಗಿಸಿಲ್ಲ. ಘಟನೆಯ ಸಂಪೂರ್ಣ ಲಾಭವನ್ನು ಜಿಲ್ಲೆಯ ಬಿಜೆಪಿಯ ಎಲ್ಲ ಎಂಎಲ್‌ಎಗಳು, ಎಂಪಿ ತೆಗೆದುಕೊಂಡಿದ್ದಾರೆ. ಈಗ ಬಾಯಿ ಮುಚ್ಚಿಕೊಂಡಿದ್ದಾರೆ. ಪ್ರತಿಭಟನೆ ನಡೆಸಿ ಕಾರ್ಯಕರ್ತರ ಮೇಲೆ ಕೇಸು ಹಾಕಿಸಿಕೊಂಡು ಇವರು ಗೆದ್ದಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ, ಕೇಂದ್ರದಲ್ಲಿ ಬಿಜೆಪಿ ಸರಕಾರವೇ ಇದೆ. ಸಿಬಿಐ ಬಿ ರಿಪೋರ್ಟ್ ಹಾಕುವುದೆಂದರೆ ನಾಚಿಕೆಗೇಡಿನ ಸಂಗತಿ. ತನಿಖೆಗಿಂತ ಮೊದಲು ಆಗಿನ ಜಿಲ್ಲಾಧಿಕಾರಿ ಸಹಜ ಸಾವು ಎಂದು ಹೇಗೆ ಹೇಳಿದರು? ಸ್ಥಳದಲ್ಲಿನ ಸಿಸಿ ಟಿವಿ ಕ್ಯಾಮೆರಾ ಬಂದ್ ಆಗಿತ್ತು. ಇದನ್ನೆಲ್ಲ ಗಮನಿಸಿ ಸಿಬಿಐ ಹೇಗೆ ಬಿ ರಿಪೋರ್ಟ್ ಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ತರಂಜನ್ ಹತ್ಯೆಯಿಂದ ಪರೇಶ್ ಮೇಸ್ತಾನವರೆಗೆ ಭಟ್ಕಳ ತಾಲೂಕಿನಲ್ಲಿ 22 ಹಿಂದೂ ಕಾರ್ಯಕರ್ತರ ಕೊಲೆ ನಡೆದಿದೆ. ಒಂದಕ್ಕೂ ನ್ಯಾಯ ಸಿಕ್ಕಿಲ್ಲ. ಈ 22 ಕೊಲೆಗಳಿಗೆ ಪೊಲೀಸರು, ರಾಜಕಾರಣಿಗಳು ಜವಾಬ್ದಾರರು. ಯಮುನಾ ನಾಯ್ಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ವ್ಯವಸ್ಥಿತವಾಗಿ ಸಿಕ್ಕಿಸಿ ಹಾಕಿ ಏಳು ವರ್ಷ ಜೈಲು ಅನುಭವಿಸುವಂತೆ ಮಾಡಿದರು. ಕೊನೆಗೂ ನ್ಯಾಯಾಲಯ ಆತನನ್ನು ನಿರ್ದೋಷಿ ಎಂದು ತೀರ್ಪು ನೀಡಿತು . ಹೀಗಾಗಿ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಮರುತನಿಖೆ ಮಾಡಬೇಕು ಎಂದು ಮುತಾಲಿಕ್​​ ಆಗ್ರಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!