ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗ್ರಾಮ ಲೆಕ್ಕಿಗರು ಇನ್ನು ಮುಂದೆ ಆಡಳಿತ ಅಧಿಕಾರಿ: ಸರ್ಕಾರದಿಂದ ಹೆಸರು ಬದಲಾಯಿಸಿ ಆದೇಶ:

ಗ್ರಾಮ ಲೆಕ್ಕಿಗರು ಇನ್ನು ಮುಂದೆ ಆಡಳಿತ ಅಧಿಕಾರಿ: ಸರ್ಕಾರದಿಂದ ಹೆಸರು ಬದಲಾಯಿಸಿ ಆದೇಶ:

 

 

ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಯನ್ನು 'ಗ್ರಾಮ ಆಡಳಿತ ಅಧಿಕಾರಿ' ಎಂದು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ, ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೇವಲ ಹುದ್ದೆಯ ಹೆಸರನ್ನು ಮಾತ್ರ ಬದಲಿಸಲಾಗಿದೆ. ಗ್ರಾಮ ಲೆಕ್ಕಿಗ ಎಂದು ಕರೆಯುವ ಬದಲು ಇನ್ನು ಮುಂದೆ ಗ್ರಾಮ ಆಡಳಿತ ಅಧಿಕಾರಿ ಎಂದು ಕರೆಯಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕ ಕ್ರಮ ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸುವ ಕುರಿತು ಪರಿಶೀಲಿಸುವಂತೆ ಕಂದಾಯ ಸಚಿವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಅಭಿಪ್ರಾಯ ಕೋರಲಾಗಿತ್ತು. ಹೆಸರು ಬದಲಾವಣೆಗೆ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಯ ಹೆಸರನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಿಸಲಾಗಿದೆ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!