ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಳದಂಗಡಿ ಸತ್ಯದೇವತೆ ಕೋಲ ವೀಕ್ಷಿಸಿದ ಸಚಿವ ಆನಂದ್ ಸಿಂಗ್ ಕುಟುಂಬ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೂ ಭೇಟಿ;

ಅಳದಂಗಡಿ ಸತ್ಯದೇವತೆ ಕೋಲ ವೀಕ್ಷಿಸಿದ ಸಚಿವ ಆನಂದ್ ಸಿಂಗ್ ಕುಟುಂಬ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೂ ಭೇಟಿ;

 

 

 

 

ಬೆಳ್ತಂಗಡಿ :ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ‌ ಪರಿಸರ ಮತ್ತು ಜೀವಿ ಶಾಸ್ರ್ತ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳ್ತಂಗಡಿಗೆ .ಡಿ 16 ರಂದು ಆಗಮಿಸಿದ್ದು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.

 

 

 

ನಂತರ ಧರ್ಮಸ್ಥಳದಲ್ಲಿ ಬಿಜೆಪಿ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕುಟುಂಬಸ್ಥರೊಂದಿಗೆ ಭೇಟಿ ನೀಡಿ ಕೆಲಹೊತ್ತು ಸತ್ಯದೇವತೆಯ ಕೋಲ (ನರ್ತನ ಸೇವೆ )ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್, ಸದಾನಂದ ಉಂಗಿಲಬೈಲು,ಸುಪ್ರಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

 

ಇಂದು  ಡಿ. 17 ರಂದು 10 ಗಂಟೆಗೆ ಪ್ರವಾಸೋದ್ಯಮ ಇಲಾಖೆಯಿಂದ ನೇತ್ರಾವತಿ ಬಳಿ‌ ನಿರ್ಮಿಸಿರುವ ಸ್ನಾನ ಘಟ್ಟಗಳ ಉದ್ಘಾಟನಾ ಕಾರ್ಯಕ್ರಮ ಭಾಗವಹಿಸಿ ನಂತರ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ಕಂಬಳದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!