ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರವಾಸೋದ್ಯಮ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಆನಂದ್ ಸಿಂಗ್ ಬೆಳ್ತಂಗಡಿ ಭೇಟಿ:ನೇತ್ರಾವತಿ ಸ್ನಾನ ಘಟ್ಟ ಉದ್ಘಾಟನೆ ಹಾಗೂ ಕಂಬಳದಲ್ಲಿ ಭಾಗಿ:

ಪ್ರವಾಸೋದ್ಯಮ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಆನಂದ್ ಸಿಂಗ್ ಬೆಳ್ತಂಗಡಿ ಭೇಟಿ:ನೇತ್ರಾವತಿ ಸ್ನಾನ ಘಟ್ಟ ಉದ್ಘಾಟನೆ ಹಾಗೂ ಕಂಬಳದಲ್ಲಿ ಭಾಗಿ:

 

 

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ‌ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ.ಡಿ 16 ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.

 

 

12 ಗಂಟೆಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ‌ ಅಲ್ಲಿಂದ ಸಂಜೆ 5 ಗಂಟೆಗೆ ಧರ್ಮಸ್ಥಳಕ್ಕೆ ಹಿಂತಿರುಗಿ ವಾಸ್ತವ್ಯ ಹೂಡಲಿದ್ದಾರೆ. ಡಿ. 17 ರಂದು ಬೆಳಿಗ್ಗೆ 10 ಗಂಟೆಗೆ ಪ್ರವಾಸೋದ್ಯಮ ಇಲಾಖೆಯಿಂದ ನೇತ್ರಾವತಿ ಬಳಿ‌ ನಿರ್ಮಿಸಿರುವ ಸ್ನಾನ ಘಟ್ಟಗಳ ಉದ್ಘಾಟನಾ ಕಾರ್ಯಕ್ರಮ ಭಾಗವಹಿಸಿ ನಂತರ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ಕಂಬಳದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!