ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಡಂತ್ಯಾರು ಹೋದ ಗರ್ಡಾಡಿಯ ಮಹಿಳೆ ನಾಪತ್ತೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು:

ಮಡಂತ್ಯಾರು ಹೋದ ಗರ್ಡಾಡಿಯ ಮಹಿಳೆ ನಾಪತ್ತೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು:

 

ಬೆಳ್ತಂಗಡಿ: ಮಡಂತ್ಯಾರು ಪೇಟೆಗೆ ಹೋದ ವಿವಾಹಿತ ಮಹಿಳೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ಎಂಬವರ ಪತ್ನಿ ಪ್ರಿಯಾ ಟಿ.ಎಂ (37) ರವರು ಡಿ. 22ರಂದು ಮಡಂತ್ಯಾರಿಗೆ ಹೋಗಿ ಮೊಬೈಲ್ ಸಿಮ್ ಕಾರ್ಡ್ ತರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಂದಿಲ್ಲ. ಅವರ ಬಳಿ ಇದ್ದ ಎರಡು ಮೊಬೈಲ್ ನಂಬರ್ ಗಳಿ ಸ್ವಿಚ್ ಆಫ್ ಆಗಿದ್ದು ಎಲ್ಲಾ ಕಡೆ ಹುಡುಕಾಡಿದರೂ ಇದುವರೆಗೆ ಪತ್ತೆಯಾಗಿಲ್ಲ ಎಂದು ಪತಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮನೆಯಿಂದ ಹೊರಟ ವೇಳೆ ನೀಲಿ ಬಣ್ಣದ ಬಿಳಿ ಹೂಗಳಿರುವ ಚೂಡಿದಾರದ ಟಾಪ್ ಮತ್ತು ನೀಲಿ ಬಣ್ಣ ಲೆಗ್ಗಿನ್ ಪ್ಯಾಂಟ್ ಧರಿಸಿದ್ದು, ಇವರು ಸುಮಾರು 5 ಅಡಿ 2 ಇಂಚು ಉದ್ದವಿದ್ದು ಸಾಧಾರಣ ಮೈಕಟ್ಟು ಹೊಂದಿದ್ದು ಬೂದು ಮೈಬಣ್ಣದವರಾಗಿದ್ದು ಕನ್ನಡ, ಮಲೆಯಾಳಿ, ಕೊಂಕಣಿ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರು ಪತ್ತೆಯಾದಲ್ಲಿ ಕೂಡಲೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರ ಮೊಬೈಲ್ ನಂಬ್ರ: 9480805370 ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ 08256-232093ಯನ್ನು ಸಂಪರ್ಕಿಸುವಂತೆ

ಕೋರಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!