ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೃದಯಾಘಾತದಿಂದ ರಂಗಸ್ಥಳದಲ್ಲೆ ಕೊನೆಯುಸಿರೆಳೆದ ಯಕ್ಷಗಾನ ಕಲಾವಿದ...!: ಕಟೀಲು ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!

ಹೃದಯಾಘಾತದಿಂದ ರಂಗಸ್ಥಳದಲ್ಲೆ ಕೊನೆಯುಸಿರೆಳೆದ ಯಕ್ಷಗಾನ ಕಲಾವಿದ...!: ಕಟೀಲು ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!

ಕಟೀಲು: ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ಯಕ್ಷಗಾನ ಪಾತ್ರಯೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ನಿನ್ನೆ ನಡೆದಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಪಟ್ಟವರು. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!