ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು, ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಅಸ್ವಸ್ಥ: ಆಹಾರ ಸೇವಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು:

ಮಂಗಳೂರು, ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಅಸ್ವಸ್ಥ: ಆಹಾರ ಸೇವಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು:

 

 

 

ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ‌ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗಿದ್ದಾರೆ. ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದಾಗಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸೋಮವಾರ ಮುಂಜಾನೆಯಿಂದಲೂ ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!