ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಕ್ಕಡ ಮರಳು ಸಾಗಾಟ ಲಾರಿ- ಬೈಕ್ ನಡುವೆ ಅಪಘಾತ : ಬೈಕ್ ಸವಾರ ಗಂಭೀರ...!

ಕೊಕ್ಕಡ ಮರಳು ಸಾಗಾಟ ಲಾರಿ- ಬೈಕ್ ನಡುವೆ ಅಪಘಾತ : ಬೈಕ್ ಸವಾರ ಗಂಭೀರ...!

 

 

 

ಬೆಳ್ತಂಗಡಿ:ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ಮರಳು ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಫೆ.01ರಂದು ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಪಟ್ರಮೆಯ ಸಿರಾಜುದ್ದೀನ್ (38) ಎಂದು ಗುರುತಿಸಲಾಗಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜುದ್ದೀನ್ ಬುಧವಾರ ಸಂಜೆ ಕೊಕ್ಕಡದಿಂದ ಉಪ್ಪಿನಂಗಡಿ ಹೋಗುವ ಸಂದರ್ಭ ಉಪ್ಪಿನಂಗಡಿ ಕಡೆಯಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಮರಳು ತುಂಬಿದ ಟಿಪ್ಪರ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೆ ಟಿಪ್ಪರ್ ಚಾಲಕ ಅಶ್ರಫ್  ನಿರ್ಲಕ್ಷ್ಯ ಚಾಲನೆಯೇ  ಕಾರಣ ಎಂದು ತಿಳಿದು ಬಂದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!