ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಚೆಗೆ ವಿರುದ್ಧವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

 

ಫೆ.11, 2019ರಲ್ಲಿ ಸತೀಶ್ ಪೂಜಾರಿ ಎಂಬಾತ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದು ಈ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಸೈದುಲ್ ಅಡಾವತ್‌ರವರು ಆರೋಪಿಯನ್ನು  ದಸ್ತಗಿರಿ ಮಾಡಿ, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸಂಪೂರ್ಣ ತನಿಖೆ ನಡೆಸಿ, ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯವಾಗಿದ್ದು ಫೆ.23ರಂದು ಆರೋಪಿತನ ವಿರುದ್ದ ಆರೋಪ ಸಾಬೀತಾಗಿ ನ್ಯಾಯಾಲಯವು ಆರೋಪಿಗೆ 10 ವರ್ಷ ಜೈಲುವಾಸ ಹಾಗೂ 10,000 ರೂ. ದಂಡ, ಜೀವಾವಧಿ ಶಿಕ್ಷೆ ಹಾಗೂ 10,000 ರೂ ದಂಡ ಮತ್ತು 6 ತಿಂಗಳ ಜೈಲುವಾಸ ಹಾಗೂ 1000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!