ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ ರಸ್ತೆ ಬದಿ ಅಗ್ನಿ ಅನಾಹುತ : ಸಮೀಪದ ರಬ್ಬರ್ ತೋಟಕ್ಕೂ ವ್ಯಾಪಿಸಿದ ಬೆಂಕಿ: ಮೆಸ್ಕಾಂ ಇಲಾಖೆ ಸಿಬ್ಬಂದಿಗಳ ಸಹಕಾರದಲ್ಲಿ ಬೆಂಕಿ ನಂದಿಸಿದ ಅಗ್ನಿಶಾಮಕ ಇಲಾಖೆ

ಲಾಯಿಲ ರಸ್ತೆ ಬದಿ ಅಗ್ನಿ ಅನಾಹುತ : ಸಮೀಪದ ರಬ್ಬರ್ ತೋಟಕ್ಕೂ ವ್ಯಾಪಿಸಿದ ಬೆಂಕಿ: ಮೆಸ್ಕಾಂ ಇಲಾಖೆ ಸಿಬ್ಬಂದಿಗಳ ಸಹಕಾರದಲ್ಲಿ ಬೆಂಕಿ ನಂದಿಸಿದ ಅಗ್ನಿಶಾಮಕ ಇಲಾಖೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಸಮೀಪದ ದೇವೊಟ್ಟು ಎಂಬಲ್ಲಿ ಫೆ.16 ರಂದು ಮಧ್ಯಾಹ್ನ 2.30 ರ ಸುಮಾರಿಗೆ ರಸ್ತೆ ಬದಿ ಬೆಂಕಿ ಅನಾಹುತ ಸಂಭವಿಸಿದ್ದು ಸಮೀಪದ ರಬ್ಬರ್ ತೋಟಕ್ಕೆ ಹಾಗೂ ವಿದ್ಯುತ್ ಟ್ರಾನ್ಸ್ಫಾರ್ಮರ್ ಸುತ್ತಲೂ ಬೆಂಕಿ ಆವರಿಸಿದ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜ ತಕ್ಷಣ ಸ್ಥಳಕ್ಕೆ ತೆರಳಿ ಮೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕಾಗಮಿಸಿದ ಮೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತರಾಗಿ ಯಶಸ್ವಿಯಾಗಿ ಬೆಂಕಿ ನಂದಿಸಿದ್ದಾರೆ.

ಲೈನ್ ಮ್ಯಾನ್‌ಗಳಾದ ರಾಜೇಶ್ , ಯೋಗೀಶ್, ವಿಜಯ, ಬಸವರಾಜ್, ಅಗ್ನಿಶಾಮಕ ಇಲಾಖೆಯ ಮಲಗೌಡ, ಚಾಲಕ ಮೋಹನ ಗೌಡ, ಶ್ರವಣ್ ನಾಯಕ್,ರಂಗನಾಥ್, ಬಸವರಾಜ್ ಬೆಂಕಿ ನಂದಿಸುವಲ್ಲಿ ಪ್ರಯತ್ನ ಪಟ್ಟರು. ದಿನದಿಂದ ದಿನ ಬಿಸಿಲಿನ ತೀವ್ರತೆ ಹೆಚ್ಚಾಗುತಿದ್ದು ಹಲವೆಡೆ ಬೆಂಕಿ ಅನಾಹುತ ಸಂಭವಿಸುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!