Home › ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ: ಏಕಹಂತದಲ್ಲಿ ಚುನಾವಣೆ
ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ: ಏಕಹಂತದಲ್ಲಿ ಚುನಾವಣೆ
ONLINE PUDU / Wednesday, March 29, 2023
ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಘೋಷಣೆ ಮಾಡಿದೆ. ಇಂದು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ರಾಜ್ಯದ ಎಲ್ಲ 244 ವಿಧಾನ ಸಭಾ ಕ್ಷೇತ್ರದಲ್ಲಿ ಏಕ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಾ29ರಿಂದ ನೀತಿ ಸಂಹಿತೆ ಜಾರಿ.
ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಏ. 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.