ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಕಾಲೇಜ್ ನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ ಬಿ ಎ ಪದೋನ್ನತಿ: 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ

ಉಜಿರೆ ಕಾಲೇಜ್ ನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ ಬಿ ಎ ಪದೋನ್ನತಿ: 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಡಾ. ಎ ಜಯಕುಮಾರ್ ಶೆಟ್ಟಿ ನಿವೃತ್ತಿಯಾಗಿದ್ದರಿಂದ ಕಾಲೇಜ್ ನ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕುಮಾರ್ ಹೆಗ್ಡೆ ಬಿ ಎ ಅವರು ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ್ದಾರೆ.

ಕಾಲೇಜ್‌ನಲ್ಲಿ ಕಳೆದ 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಪ್ರಸ್ತುತ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರೂ, ವಿಜ್ಞಾನ ನಿಕಾಯದ ಡೀನ್ ಆಗಿದ್ದಾರೆ.

ಡಾ.ಕುಮಾರ್ ಹೆಗ್ಡೆ ಬಿ ಎ ಸಾಧನೆ:

ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್ ನೊಂದಿಗೆ ಎಂಎಸ್ಸಿ ಪದವಿ ಪಡೆದುಕೊಂಡಿರುವ ಇವರು ಎಂಫಿಲ್, ಪಿಜಿಡಿ ಹೆಚ್ ಆರ್ ಎಂ, ಪಿ ಹೆಚ್ ಡಿ ಮಾಡಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಯಾಗಿ ಶ್ರೇಷ್ಠ ಯೋಜನಾಧಿಕಾರಿ ರಾಜ್ಯ ಪ್ರಶಸ್ತಿ ಹಾಗೂ ಇಂದಿರಾಗಾಂಧಿ ಎನ್ಎಸ್ಎಸ್ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ.

5 ವರ್ಷಗಳ ಕಾಲ ಜವಾಬ್ದಾರಿಯುತವಾಗಿ ಕಾಲೇಜಿನ ವಾರ್ಷಿಕ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ವಿಶ್ವವಿದ್ಯಾನಿಲಯ ಮಟ್ಟದ ಶ್ರೇಷ್ಠ ವಾರ್ಷಿಕ ಸಂಚಿಕೆ ಪ್ರಶಸ್ತಿಯನ್ನು ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ವ್ಯಕ್ತಿತ್ವ ವಿಕಸನ, ಸಂಘಟನೆ, ಜೆಸಿಐ ಸಂಸ್ಥೆಯ ಪದಾಧಿಕಾರಿಯಾಗಿ, ತರಬೇತುದಾರನಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಗಳನ್ನ ನಡೆಸಿ ಕೊಟ್ಟಿದ್ದಾರೆ.‌ಕಾರ್ಯಕ್ರಮ ನಿರೂಪಕರಾಗಿ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳ ನಿರೂಪಣೆ ಮಾಡಿದ್ದಾರೆ.ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ ಲೇಖನಗಳನ್ನೂ ಪ್ರಕಟಪಡಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತಿ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಪರಿಸರ ಈ‌ ವಿಷಯಗಳಿಗೆ ಸಂಬಂಧಿಸಿದಂತೆ ಉಪನ್ಯಾಸಗಳನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘ ಅಮುಕ್ಟ್ ಇದರ ಉಪಾಧ್ಯಕ್ಷರಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಸಾಂಸ್ಕೃತಿಕ ಸಂಘಟನೆ ಸಮೂಹ ಇದರ ಅಧ್ಯಕ್ಷರಾಗಿರೂ ಆಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!