ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮದ್ದಡ್ಕ: ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ..!:ಬೆಳ್ತಂಗಡಿ ಪೊಲೀಸರಿಂದ ಪರಿಶೀಲನೆ

ಮದ್ದಡ್ಕ: ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ..!:ಬೆಳ್ತಂಗಡಿ ಪೊಲೀಸರಿಂದ ಪರಿಶೀಲನೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ಉದಯ ಕುಮಾರ್ ಎಂಬವರ ಜಾಗದಲ್ಲಿ ಅಪರಿಚಿತ ಮಹಿಳೆಯೋರ್ವರ ಶವ ನೇಣುಬಿಗಿದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಮಾ.26 ರಂದು ಮಧ್ಯಾಹ್ನ ವ್ಯಕ್ತಿಯೊಬ್ಬರು ಆ ಸ್ಥಳಕ್ಕೆ ಹೋದಾಗ ಸುಮಾರು 35 ರಿಂದ 40 ವರ್ಷದೊಳಗಿನ ಮಹಿಳೆಯ ಮೃತದೇಹ ನೇಣುಬಿಗಿದುಕೊಂಡ ರೀತಿಯಲ್ಲಿ ಕಂಡುಬಂದಿದೆ. ತಕ್ಷಣ ಅವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ,ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಎರಡು ಪ್ಲಾಸ್ಟಿಕ್ ಬಕೆಟ್ ಮತ್ತು ಫೆ.19 ರ ಮಂಗಳೂರು ಸ್ಟೇಟ್ ಬ್ಯಾಂಕ್ ನಿಂದ ಗುರುವಾಯನಕೆರೆಗೆ ಮಾಡಿದ ಬಸ್ ಟಿಕೆಟ್ ಪತ್ತೆಯಾಗಿದೆ.

ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜಾಗದ ಮಾಲೀಕ ಉದಯ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರು ನೀಡಿದ್ದಾರೆ. ಮಂಗಳೂರು ಆಸ್ಪತ್ರೆಯ ವೈದ್ಯರು ಘಟನಾ ಸ್ಥಳಕ್ಕೆ ಬಂದು ಶವಪರೀಕ್ಷೆ ಮಾಡಿ ಬಳಿಕ ದಫನ ಕಾರ್ಯ ನಡೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!