ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಗೌರವದ ಗರಿ: ಗಿನ್ನಿಸ್ ದಾಖಲೆ ಪುಟ ಸೇರಿದ ರೈಲು ನಿಲ್ದಾಣ

ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಗೌರವದ ಗರಿ: ಗಿನ್ನಿಸ್ ದಾಖಲೆ ಪುಟ ಸೇರಿದ ರೈಲು ನಿಲ್ದಾಣ

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಮತ್ತೊಂದು ಗೌರವದ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಈ ರೈಲು ನಿಲ್ದಾಣದ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ವಿಶ್ವದ ಅತಿ ಉದ್ದನೆಯ ರೈಲ್ವೆ ಫ್ಲಾಟ್‌ಫಾರ್ಮ್ ಇದಾಗಿದೆ.

ಮಾರ್ಚ್ 12ರಂದು ಧಾರವಾಡದಲ್ಲಿ ಏರ್ಪಡಿಸಲಾಗಿದ್ದ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಪ್ಲಾಟ್‌ಫಾರ್ಮ್ನಲ್ಲಿ ನಿಂತಿದ್ದ ಇಲೆಕ್ಟ್ರಿಕ್  ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ಮತ್ತು ಬೆಳಗಾವಿ-ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲುಗಳಿಗೂ ಹಸಿರು ನಿಶಾನೆ ತೋರಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!