ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! : ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ: ಬಸ್ ಪಾಸ್ ಇಲ್ಲದಿದ್ದರೂ ಹಾಲ್ ಟಿಕೆಟ್ ತೋರಿಸಿ..

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! : ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ: ಬಸ್ ಪಾಸ್ ಇಲ್ಲದಿದ್ದರೂ ಹಾಲ್ ಟಿಕೆಟ್ ತೋರಿಸಿ..

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು ಮಾ. 31 ರಿಂದ ಏ.15 ರವರೆಗೆ ನಡೆಯಲಿರುವ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ತೆರಳಲು ಮತ್ತು ವಾಪಸ್ ಮರಳಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಮನವಿ ಮಾಡಿದ್ದರು. 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣ ಅನುಮತಿಸಲು ನಿಗಮದ ಎಲ್ಲಾ ಚಾಲಕ ನಿರ್ವಾಹಕರುಗಳಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಜೊತೆಗೆ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸು ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸು ಹತ್ತಲು - ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಚಾಲನಾ ಸಿಬ್ಬಂದಿಗೆ ಸೂಚನೆ ನೀಡಲು ತೀರ್ಮಾನಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!