ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೈವ ನರ್ತಕ ಕಾಂತು ಅಜಿಲ ಕುಟುಂಬಕ್ಕೆ ಪಟ್ಲ ಪೌಂಡೇಷನ್ ಟ್ರಸ್ಟ್ ನಿಂದ ₹ 1 ಲಕ್ಷ ಆರ್ಥಿಕ ನೆರವು :

ದೈವ ನರ್ತಕ ಕಾಂತು ಅಜಿಲ ಕುಟುಂಬಕ್ಕೆ ಪಟ್ಲ ಪೌಂಡೇಷನ್ ಟ್ರಸ್ಟ್ ನಿಂದ ₹ 1 ಲಕ್ಷ ಆರ್ಥಿಕ ನೆರವು :

 

 

ಮಂಗಳೂರು : ದೈವ ನರ್ತನ ಮಾಡುತ್ತಿರುವಾಗಲೇ ಸಾವನ್ನಪ್ಪಿದ ದೈವ ನರ್ತಕ ಕಾಂತು ಅಜಿಲ ಅವರ ಕುಟುಂಬಕ್ಕೆ ಪಟ್ಲ ಪೌಂಡೇಶನ್ ಟ್ರಸ್ಟ್ 1 ಲಕ್ಷ ರೂ ಆರ್ಥಿಕ ನೆರವು  ಘೋಷಿಸಿದೆ.

ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ 30 ರಂದು   ನಡೆಯುತ್ತಿದ್ದ ನೇಮೋತ್ಸವದ ಸಂದರ್ಭದಲ್ಲಿ ದೈವ ನರ್ತನ ವೇಳೆಯೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರೂ 1 ಲಕ್ಷ  ಆರ್ಥಿಕ ನೆರವು ಘೋಷಣೆ ಮಾಡಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!