ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರ್ನಾಟಕ ವಿಧಾನ ಸಭಾ ಚುನಾವಣೆ 2023: ಎ17 ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾಮ ಪತ್ರ ಸಲ್ಲಿಕೆ:

ಕರ್ನಾಟಕ ವಿಧಾನ ಸಭಾ ಚುನಾವಣೆ 2023: ಎ17 ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾಮ ಪತ್ರ ಸಲ್ಲಿಕೆ:

 

 

ಬೆಳ್ತಂಗಡಿ: ಕರ್ನಾಟಕ ವಿಧಾನ ಸಭಾ ಚುನಾವಣೆ ಮೇ 10 ರಂದು ನಡೆಯಲಿದ್ದು   ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ 17 ಸೋಮವಾರ ನಾಮ ಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ   ಬೃಹತ್ ಮೆರವಣಿಗೆಯಲ್ಲಿ ತಾಲೂಕು ಆಡಳಿತ ಸೌಧಕ್ಕೆ  ತೆರಳಿ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಪ್ರಮುಖ ನಾಯಕರುಗಳು, ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

 

 

ಈಗಾಗಲೇ ತಾಲೂಕಿನಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಶಾಸಕ ಹರೀಶ್ ಪೂಂಜ ಅವರಿಗೆ ಜನತೆಯಿಂದ ಅಭೂತಪೂರ್ವ ಬೆಂಬಲ ಸಿಗುತ್ತಿದೆ.ಕಳೆದ 5 ವರ್ಷಗಳಲ್ಲಿ ತಾಲೂಕಿನಲ್ಲಿ ಸಾವಿರಾರೂ ಕೋಟಿ ಅನುದಾನದ ಮೂಲಕ    ರಾಜಕೀಯ ರಹಿತವಾಗಿ ಅಭಿವೃದ್ಧಿಗೊಳಿಸಿ ಇಡೀ ರಾಜ್ಯಕ್ಕೆ ಬೆಳ್ತಂಗಡಿ ತಾಲೂಕನ್ನು ಮಾದರಿಯನ್ನಾಗಿ  ರೂಪಿಸಿ ನವ ಬೆಳ್ತಂಗಡಿಯ ಕನಸನ್ನು ಸಾಕಾರಗೊಳಿಸಿದ್ದಾರೆ.ಈ ಮೂಲಕ ಈ ಬಾರಿಯ ಚುನಾವಣೆ ಹರೀಶ್ ಪೂಂಜ ಅವರಿಗೆ ಸವಾಲಿನದ್ದಲ್ಲ ಎಂಬುವುದು ಜನರ ಅಭಿಪ್ರಾಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!