ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಏ.22 ಡಿಕೆ ಶಿವಕುಮಾರ್ ಉಜಿರೆಗೆ ಆಗಮನ: ಶ್ರೀ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಚುನಾವಣಾ ಪ್ರಚಾರ

ಏ.22 ಡಿಕೆ ಶಿವಕುಮಾರ್ ಉಜಿರೆಗೆ ಆಗಮನ: ಶ್ರೀ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಚುನಾವಣಾ ಪ್ರಚಾರ

ಬೆಳ್ತಂಗಡಿ: ಚುನಾವಣಾ ಪ್ರಚಾರ ಹಿನ್ನೆಲೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಏ.22ರಂದು ಉಜಿರೆಗೆ ಆಗಮಿಸಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 10ಗಂಟೆಗೆ ಧರ್ಮಸ್ಥಳಕ್ಕೆ ತಲುಪಿ ಬಳಿಕ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಹಾಗೂ ಕೊಪ್ಪ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನ್ಯಾಯವಾದಿ ಸುಧೀರ್ ಕುಮಾರ್, ಮರೊಳ್ಳಿಯವರು ಪ್ರಧಾನ ಭಾಷಣ ಮಾಡಲಿದ್ದಾರೆ. ಎ.ಐ.ಸಿ.ಸಿ ವೀಕ್ಷಕರಾದ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!