ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ‌ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜ: ಕಾರ್ಯಕರ್ತರಲ್ಲಿ ವಿಜಯೋತ್ಸವದ ಸಂಭ್ರಮ: 50 ಸಾವಿರಕ್ಕಿಂತಲೂ ಅಧಿಕ ಮತಗಳ ಅಂತರದ ಗೆಲುವಿನ‌ ನಿರೀಕ್ಷೆ:

ಬೆಳ್ತಂಗಡಿ‌ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜ: ಕಾರ್ಯಕರ್ತರಲ್ಲಿ ವಿಜಯೋತ್ಸವದ ಸಂಭ್ರಮ: 50 ಸಾವಿರಕ್ಕಿಂತಲೂ ಅಧಿಕ ಮತಗಳ ಅಂತರದ ಗೆಲುವಿನ‌ ನಿರೀಕ್ಷೆ:

 

 

ಬೆಳ್ತಂಗಡಿ :ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇವತ್ತು ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಫಿಕ್ಸ್ ಆಗುತಿದ್ದಂತೆ ಬಿಜೆಪಿ ಕಾರ್ಯಕರ್ತರು ಗೆಲುವಿನ ವಿಜಯೋತ್ಸವದ  ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ 50 ಸಾವಿರಕ್ಕಿಂತಲೂ ಅಧಿಕ ಮತಗಳ ಅಂತರದಲ್ಲಿ ಪ್ರತಿ ಸ್ಪರ್ಧಿ ಎದುರು ಗೆಲುವನ್ನು ಸಾಧಿಸಲಿದ್ದಾರೆ. ಎಂಬ ಸಂದೇಶಗಳು ರವಾನೆಯಾಗುತ್ತಿರುವುದಲ್ಲದೇ ಆತ್ಮ ವಿಶ್ವಾಸದಲ್ಲಿ ಕಾರ್ಯಕರ್ತರು ಇದ್ದಾರೆ.‌ಇದಕ್ಕೆಲ್ಲ ಪುಷ್ಟಿ ನೀಡುವಂತೆ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿಯೇ ತನ್ನ ಮೂಲ ಮಂತ್ರ ಎಂಬಂತೆ ಹರೀಶ್ ಪೂಂಜ ಅವರು ತಾಲೂಕಿನ ಎಲ್ಲಾ ಗ್ರಾಮಗಳನ್ನು ಸುತ್ತಾಡಿದ್ದಲ್ಲದೇ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ.ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಿದ್ದಾರೆ ಎಂಬುವುದು ಕೂಡ ಕಾರ್ಯಕರ್ತರ ಲೆಕ್ಕಚ್ಚಾರವಾಗಿದೆ. ಎಲ್ಲದಕ್ಕೂ ಉತ್ತರ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಸಿಗಲಿದೆ.ಅಲ್ಲಿಯವರೆಗೆ ಎಲ್ಲರೂ ಕುತೂಹಲದಿಂದ ಕಾಯುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!