ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕಿಗೆ 6ಸಾವಿರ ಕೋಟಿ‌ ಅನುದಾನ‌ದ ಭರವಸೆ:ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಮಾಡುವಂತೆ ಮನವಿ:ಬಿಜೆಪಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿಗೆ 6ಸಾವಿರ ಕೋಟಿ‌ ಅನುದಾನ‌ದ ಭರವಸೆ:ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಮಾಡುವಂತೆ ಮನವಿ:ಬಿಜೆಪಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮತ್ತೊಮ್ಮೆ ಶಾಸಕನಾಗಿ ನನ್ನನ್ನು ಆಯ್ಕೆ ಮಾಡಿದ್ದಲ್ಲಿ ತಾಲೂಕಿಗೆ 6 ಸಾವಿರ ಕೋಟಿ ಅನುದಾನ ತಂದು ತಾಲೂಕಿನ ಸಮಗ್ರ ಅಭಿವೃದ್ಧಿಯನ್ನು ಮಾಡುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಅವರು ಹೇಳಿದ್ದಾರೆ

ಅವರು ಏ.2 ರಂದು ಧರ್ಮಸ್ಥಳ ಸಹಕಾರಿ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ 'ಕಳೆದ ಐದು ವರ್ಷದಲ್ಲಿ ಕಾರ್ಯಕರ್ತರು ಹೇಳಿದ ಕೆಲಸವನ್ನು ಮಾಡಿದ್ದೇನೆ. ಮುಂದಿನ ಐದು ವರ್ಷದಲ್ಲಿ ಉಳಿದ ಕೆಲಸವನ್ನು ಮಾಡಿಕೊಡುತ್ತೇನೆ. ಕಾಂಗ್ರೆಸ್ ಇಂದು ಅಪಪ್ರಚಾರ ಮಾಡುವ ಕೆಲಸವನ್ನು ಮಾಡುತ್ತಿದ್ದು, ಅದಕ್ಕೆ ತಕ್ಕ ಉತ್ತರವನ್ನು ನೀಡುವ ಕೆಲಸ ಕಾರ್ಯಕರ್ತರು ಮಾಡಬೇಕು' ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, 'ದೇಶಕ್ಕೆ ಮೋದಿ ಕೆಲಸ ಮಾಡಿದಂತೆ ತಾಲೂಕಿಗೆ ಹರೀಶ್ ಪೂಂಜ ಕೆಲಸ ಮಾಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು' ಎಂದರು.

ಸಭೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ಧನ್, ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಧರ್ಮಸ್ಥಳ ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿಗಳಾದ ರಾಜೇಶ್ ಪೆಂರ್ಬುಡ, ಮಹಾಬಲ ಗೌಡ, ಮಂಡಲ ಉಪಾಧ್ಯಕ್ಷರಾದ ಸೀತಾರಾಮ ಬೆಳಾಲ್, ಕೊರಗಪ್ಪ ಗೌಡ, ಯುವಮೋರ್ಚಾ ಅಧ್ಯಕ್ಷ ಯಶವಂತ ಬೆಳಾಲ್ ಉಪಸ್ಥಿತರಿದ್ದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಗೌಡ ಆಲಂಬಿಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕರುಣಾಕರ ಶಿಶಿಲ ವಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!