ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಚುನಾವಣಾ ಪ್ರಚಾರ ಆರಂಭ: ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಚುನಾವಣಾ ಪ್ರಚಾರ ಆರಂಭ: ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸ್ಪರ್ಧಿಸಲು ಹರೀಶ್ ಪೂಂಜರಿಗೆ ಟಿಕೆಟ್ ಸಿಕ್ಕಿದ್ದು ಈ ಬೆನ್ನಲ್ಲೆ ಅವರು ಏ.12ರಂದು ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಬಳಿಕ ಕುತ್ಲೂರು ಶಕ್ತಿ ಕೇಂದ್ರದಲ್ಲಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾಮ ಪಂಚಾಯತ್, ಅಧ್ಯಕ್ಷೆ ಆಶಾಲತಾ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ಕಾರ್ಯದರ್ಶಿ ನಿತೇಶ್, ಕುತ್ಲೂರು ಶಕ್ತಿ ಕೇಂದ್ರ ಪ್ರಮುಖ್ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!