ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.! ನಿಯಂತ್ರಣ ತಪ್ಪಿ ಚಾರ್ಮಾಡಿ‌ ಘಾಟ್ ನ ಕಂದಕಕ್ಕೆ ಉರುಳಿದ ಕಾರು..! ಇಬ್ಬರಿಗೆ ಗಂಭೀರ ಗಾಯ..!

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.! ನಿಯಂತ್ರಣ ತಪ್ಪಿ ಚಾರ್ಮಾಡಿ‌ ಘಾಟ್ ನ ಕಂದಕಕ್ಕೆ ಉರುಳಿದ ಕಾರು..! ಇಬ್ಬರಿಗೆ ಗಂಭೀರ ಗಾಯ..!

 

 

ಉಜಿರೆ: ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು‌ ಏ.09 ರಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯಷ್ಟು   ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ.

 

 

 

 

 

ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ ಸಹಿತ ಪುತ್ರಿ ಪೂರ್ಣಿಮಾ ಶೆಟ್ಟಿ ಮೊಮ್ಮಗ ಸಮೃದ್ಧ್ ಹಾಗೂ ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿಯವರು ಗಾಯಗೊಂಡಿದ್ದಾರೆ.

 

 

 

ಅದರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!