ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ..!

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ..!

ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.

ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15) ತಾಲೂಕು ಪಂಚಾಯತ್‌ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಶಾಲೆಗೆ ರಜೆ ಇರುವ ಕಾರಣ ದೊಡ್ಡಮನ ಮನೆಗೆ ಬಂದಿದ್ದು, ಮಧ್ಯಾಹ್ನ  ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಶಿವಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ತಕ್ಷಣ ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು ಮನೆಯವರ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!