ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟ್ವಾಳ: ಹಿಂಬದಿಯಿಂದ ಡಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್ :ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು:

ಬಂಟ್ವಾಳ: ಹಿಂಬದಿಯಿಂದ ಡಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್ :ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು:

 

 

ಬಂಟ್ವಾಳ: ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (59) ಎಂದು ಗುರುತಿಸಲಾಗಿದೆ.ಅವರು ತನ್ನ ದ್ವಿಚಕ್ರ ವಾಹನದಲ್ಲಿ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿ.ಸಿ. ರೋಡ್ ಕಡೆಗೆ ಬರುತಿದ್ದ ಸಂದರ್ಭ ಬೆಳ್ತಂಗಡಿ ಕಡೆಯಿಂದ  ಮಂಗಳೂರಿಗೆ ಬರುತಿದ್ದ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.‌ಡಿಕ್ಕಿ ಹೊಡೆದ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಂಪಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಕೆಲವೇ ಗಂಟೆಗಳಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!