ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸಿದ ಯುವಕ-ಯುವತಿ: ಉಜಿರೆಯಲ್ಲಿ ಯುವಕನ ಮೇಲೆ ತಂಡದಿಂದ ಹಲ್ಲೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸಿದ ಯುವಕ-ಯುವತಿ: ಉಜಿರೆಯಲ್ಲಿ ಯುವಕನ ಮೇಲೆ ತಂಡದಿಂದ ಹಲ್ಲೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಪರಿಚಯದ ಯುವತಿಯೊಂದಿಗೆ ಮಾತನಾಡಿದ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಏ.04ರಂದು ಉಜಿರೆಯಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರುವ ಕಕ್ಕಿಂಜೆ ನಿವಾಸಿ ಜಹೀರ್ (22) ಎಂಬಾತ ಬಸ್ಸಿನಲ್ಲಿ ಬರುತ್ತಿರುವಾಗ ಪರಿಚಯದ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಳಿಕ ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಜಹೀರ್ ನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಹೀರ್ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು 4 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!