ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರ್ನಾಟಕ ವಿಧಾನ ಸಭಾ ಚುನಾವಣೆ 2023:ಮಾದರಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ:

ಕರ್ನಾಟಕ ವಿಧಾನ ಸಭಾ ಚುನಾವಣೆ 2023:ಮಾದರಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ:

 

ಬೆಂಗಳೂರು :ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆ ಜಾರಿಯಲ್ಲಿದ್ದ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ಇಂದು ಹಿಂದಕ್ಕೆ ಪಡೆದಿದೆ. ಮಾ.29 ರಿಂದ ರಾಜ್ಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು. ಇದೀಗ ರಾಜ್ಯದ ವಿಧಾನಸಭೆ ಚುನಾವಣೆ ಮೇ 10 ರಂದು ನಡೆದಿದ್ದು, ಫಲಿತಾಂಶವು ಮೇ 13 ರಂದು ಹೊರಬಿದ್ದಿದೆ. ಇಂದು ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ವಾಪಸ್ ಪಡೆದಿದೆ.

ಈ ಸಂಬಂಧ ಚುನಾವಣಾ ಆಯೋಗ ಕಾರ್ಯದರ್ಶಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಚುನಾವಣೆ ಘೋಷಣೆ ದಿನಾಂಕದಿಂದ ಚುನಾವಣೆ ಪ್ರಕ್ರಿಯೆ ಅಂತ್ಯವಾಗುವವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದರಂತೆ ಚುನಾವಣಾ ಆಯೋಗ ಸೋಮವಾರಕ್ಕೆ ನೀತಿ ಸಂಹಿತೆ ಹಿಂಪಡೆದು ಆದೇಶ ಹೊರಡಿಸಿದೆ.ಚುನಾವಣಾ ಆಯೋಗ ‌ನಿನ್ನೆ ಕರ್ನಾಟಕ ವಿಧಾನಸಭೆ ಚುನಾಯಿತ ಶಾಸಕರ ಅಧಿಕೃತ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ಈ ಸಂಬಂಧ ನಿನ್ನೆ ಅಧಿಸೂಚನೆ ಹೊರಡಿಸಲಾಗಿತ್ತು.‌ ಇದೀಗ ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆಯನ್ನು ಹಿಂಪಡೆದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!