ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ: ಹರೀಶ್‌ ಪೂಂಜರಿಗೆ ಶುಭ ಹಾರೈಸಿದ ನರೇಂದ್ರ ಮೋದಿ::

ಪ್ರಧಾನಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ: ಹರೀಶ್‌ ಪೂಂಜರಿಗೆ ಶುಭ ಹಾರೈಸಿದ ನರೇಂದ್ರ ಮೋದಿ::

 

 

ಬೆಳ್ತಂಗಡಿ :ಬಿಜೆಪಿ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕೊಳ್ನಾಡಿನಲ್ಲಿ ನಡೆದ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗಿಯಾದರು.

ಕಾರ್ಯಕ್ರಮದ ವೇದಿಕೆಯಲ್ಲಿ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಹರೀಶ್‌ ಪೂಂಜ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಅನುಗ್ರಹ ಪ್ರಸಾದ ನೀಡಿ ಮೋದಿ ಅವರಿಂದ ಆಶೀರ್ವಾದ ಪಡೆದರು.

ಪ್ರಧಾನಿ ಮೋದಿ ಅವರಿಗೆ ದುಬಾರಿ ಉಡುಗೊರೆ ನೀಡುವ ಬದಲು ದೇವರ ಪ್ರಸಾದ ನೀಡಿ, ಆರೋಗ್ಯ ಭಾಗ್ಯ ಕರುಣಿಸಲಿ ಎಂದು  ಹರೀಶ್‌ ಪೂಂಜ ಅವರು ದೇವರಲ್ಲಿ ಪ್ರಾರ್ಥಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!