ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುರ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು ನಿಧನ:

ಸುರ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು ನಿಧನ:

 

 

 

 

ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮೇ 31 ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

 

ಅಶೋಕನಗರದ ಪಾಲ್ಗುಣಿ ನಗರದ ಅವರ ನಿವಾಸದಲ್ಲಿ ಬೆಳಗ್ಗೆ 8:30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹುಟ್ಟೂರಾದ ಸುರ್ಯಗುತ್ತಿನಲ್ಲಿ ಅವರ ಅಂತಿಮ ವಿಧಿ ವಿಧಾನಗಳನ್ನು ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಾಗುವುದು.ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!