ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರವೀಣ್ ನೆಟ್ಟಾರು ಪತ್ನಿಯನ್ನು ಮರು ನೇಮಕ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ:

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮರು ನೇಮಕ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ:

 

 

 

ಬೆಂಗಳೂರು :ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಗೆ ಅನುಕಂಪದ ಆಧಾರದಲ್ಲಿ ಹಿಂದಿನ ಸಿಎಂ ಬೊಮ್ಮಾಯಿ ಅವರ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಅವರನ್ನು ಕೆಲಸದಿಂದ ವಜಾಗೊಳಿಸುವ ಕಾರ್ಯ ಮಾಡಿದೆ.ಇದಕ್ಕೆ ಸರ್ಕಾರದ ವಿರುದ್ಧ ಅಪಸ್ವರಗಳು ಕೇಳಿಬರುತಿದೆ.

 

 

 

 

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿ ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.ಅದರೆ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!