ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಗಮನ: ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಸ್ವಾಗತ

ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಗಮನ: ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಸ್ವಾಗತ

ಬೆಳ್ತಂಗಡಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೇ 08 ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಕಾಪು ಮತ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಆಗಮಿಸಿದ ಅವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಅವರು ಧರ್ಮಸ್ಥಳ ಹೆಲಿಪ್ಯಾಡ್ ನಲ್ಲಿ ಸ್ವಾಗತಿಸಿದರು. ನಂತರ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಹೆಗ್ಗಡೆಯವರು ಮುಖ್ಯಮಂತ್ರಿ ಅವರನ್ನು ಗೌರವಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!