ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿದ್ದರಾಮಯ್ಯರ ವಿರುದ್ಧ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್: ಶಾಸಕ ಹರೀಶ್ ಪೂಂಜ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ

ಸಿದ್ದರಾಮಯ್ಯರ ವಿರುದ್ಧ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್: ಶಾಸಕ ಹರೀಶ್ ಪೂಂಜ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ

ಬೆಂಗಳೂರು: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್‌ಗೆ ಜೂ.09ರಂದು ಹೈಕೋರ್ಟ್ ತಡೆ ವಿಧಿಸಿದೆ.

ಬೆಳ್ತಂಗಡಿಯಲ್ಲಿ ಮೇ 22ರಂದು ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ, ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ ಎಂದು ಕಿಡಿ ಕಾರಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಹರೀಶ್ ಪೂಂಜರ ವಿರುದ್ಧ ವಿವಿದೆಡೆ ಕೇಸ್ ದಾಖಲಾಗಿತ್ತು.

ಪ್ರಕರಣದ ಬಗ್ಗೆ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ಅವರು ಹೈಕೋರ್ಟ್ನಲ್ಲಿ ಹರೀಶ್ ಪೂಂಜಾ ಪರ ವಾದ ಮಂಡಿಸಿದ್ದು ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದಿದ್ದರು. ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!