ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 4 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ: 2ನೇ ಬಾರಿ ಮನೆಯಿಂದ ಎಸ್ಕೇಪ್..!

4 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ: 2ನೇ ಬಾರಿ ಮನೆಯಿಂದ ಎಸ್ಕೇಪ್..!

 

ಬೆಳ್ತಂಗಡಿ: ಗುರುವಾಯನಕೆರೆಯ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ ವಿವಾಹಿತೆ ಕವನಾ ತನ್ನ 4 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಜೂ.06ರಂದು ನಡೆದಿದೆ.

ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ ಆರ್ ಹಾಗೂ ಪತ್ನಿ ಕವನ(25) ರಾತ್ರಿ 09:30ರ ವೇಳೆಗೆ ಊಟ ಮಾಡಿ ಮಲಗಿದ್ದು, ಬೆಳಗಾಗುವುದರೊಳಗೆ ಮಗುವಿನೊಂದಿಗೆ ಕಾಣೆಯಾಗಿದ್ದಾರೆ. 2022 ನೇ ಇಸವಿಯಲ್ಲಿ ಕೂಡ ಈ ಮಹಿಳೆ ಕಾಣೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆಕೆ ಪರಿಚಯಸ್ಥರೊಂದಿಗೆ ತೆರಳಿರುವ ವಿಷಯ ತಿಳಿದು ಪೊಲೀಸರು ಪತ್ತೆ ಮಾಡಿದ್ದರು. ಇದಾದ ಬಳಿಕವೂ ಆಕೆ ಯಾರೊಂದಿಗೋ ಫೋನಿನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದುದನ್ನು ಪತ್ನಿ ಗಮನಿಸಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಪತ್ನಿ ಹಾಗೂ ಮಗನನ್ನು ಪತ್ತೆ ಮಾಡಿಕೊಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಪತ್ನಿ ನವೀನ್ ಕೆ.ಆರ್  ದೂರು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!