ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮೇಲೆ ಮುನಿಸು..! ಪಕ್ಷದಲ್ಲಿದ್ದೇ ಪಕ್ಷಕ್ಕೆ ದ್ರೋಹ..!?: ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ದಾಖಲೆ ಸಹಿತ ದೂರು...!

ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮೇಲೆ ಮುನಿಸು..! ಪಕ್ಷದಲ್ಲಿದ್ದೇ ಪಕ್ಷಕ್ಕೆ ದ್ರೋಹ..!?: ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ದಾಖಲೆ ಸಹಿತ ದೂರು...!

ಬೆಳ್ತಂಗಡಿ : ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬೆಳ್ತಂಗಡಿ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೂರು ಪತ್ರವನ್ನು ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಗೌಡರವರು ಪಕ್ಷದ ಹಾಗೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಬಗ್ಗೆ ಸಿಟ್ಟುಗೊಂಡ ಬೆಳ್ತಂಗಡಿ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ 18 ಪುಟಗಳ ಸಹಿ ಹಾಗೂ ಕೆಲ ದಾಖಲೆಗಳ ಜೊತೆ ದೂರು ಪತ್ರವನ್ನು ನೀಡಿದ್ದಾರೆ.

ದೂರಿನಲ್ಲಿ, ಕರ್ನಾಟಕ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಗೌಡರವರು ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದ ಚುನಾವಣಾ ಫಲಿತಾಂಶ ದಿನಾಂಕದವರೆಗೆ ಪಕ್ಷದ ಪ್ರಮುಖ ಸ್ಥಾನದಲ್ಲಿ ಇದ್ದುಕೊಂಡು ಪಕ್ಷದ ಯಾವುದೇ ಸಭೆ ಸಮಾರಂಭದಲ್ಲಿ ಹಾಗೂ ಉಜಿರೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಭಾಗವಹಿಸಿದ ಪ್ರಚಾರ ಸಭೆಯಲ್ಲಿಯೂ ಭಾಗವಹಿಸಿರುವುದಿಲ್ಲ. ಮತ್ತು ತಮ್ಮ ಆಪ್ತರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಡಿ ಎಂದು ಹೇಳಿದ ಬಗ್ಗೆ ದಾಖಲೆಗಳನ್ನು ಈ ಪತ್ರದೊಂದಿಗೆ ಕಳುಹಿಸಲಾಗುತ್ತದೆ. ಶೀಘ್ರವಾಗಿ ಪಕ್ಷಕ್ಕೆ ದ್ರೋಹ ಮಾಡಿದ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ತಮ್ಮಲ್ಲಿ ಈ ಮೂಲಕ ವಿನಂತಿ ಎಂದು ದೂರು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!