ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸ್ಲೀಪರ್ ಬಸ್‌ಗೆ ದಂತದಿಂದ ತಿವಿದು ಹಾನಿಗೈದ ಕಾಡಾನೆ..!: ಕುಕ್ಕೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಘಟನೆ: ಚಾಲಕನ ಸಮಯ ಪ್ರಜ್ಞೆ: ಅಪಾಯದಿಂದ ಪ್ರಯಾಣಿಕರು ಪಾರು..!

ಸ್ಲೀಪರ್ ಬಸ್‌ಗೆ ದಂತದಿಂದ ತಿವಿದು ಹಾನಿಗೈದ ಕಾಡಾನೆ..!: ಕುಕ್ಕೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಘಟನೆ: ಚಾಲಕನ ಸಮಯ ಪ್ರಜ್ಞೆ: ಅಪಾಯದಿಂದ ಪ್ರಯಾಣಿಕರು ಪಾರು..!

ಸುಬ್ರಹ್ಮಣ್ಯ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಜೂ.01ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ ಬದಿ ಕಾಡಾನೆ ನಿಂತಿತ್ತು. ಆನೆಯನ್ನು ನೋಡಿದ ಬಸ್ ಚಾಲಕ ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಕಾಡಾನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!