ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ: ಸೌಜನ್ಯ ರೇಪ್& ಮರ್ಡರ್ ಪ್ರಕರಣ: ಸಿಬಿಐ ವಿಶೇಷ ಕೋರ್ಟ್ ಗೆ ಆರೋಪಿ ಸಂತೋಷ್ ರಾವ್ ಹಾಜರಿ: ಇಂದು ಸಿಬಿಐ ಕೋರ್ಟ್ ನಲ್ಲಿ ಪ್ರಕರಣದ ತೀರ್ಪು ಪ್ರಕಟ

ಧರ್ಮಸ್ಥಳ: ಸೌಜನ್ಯ ರೇಪ್& ಮರ್ಡರ್ ಪ್ರಕರಣ: ಸಿಬಿಐ ವಿಶೇಷ ಕೋರ್ಟ್ ಗೆ ಆರೋಪಿ ಸಂತೋಷ್ ರಾವ್ ಹಾಜರಿ: ಇಂದು ಸಿಬಿಐ ಕೋರ್ಟ್ ನಲ್ಲಿ ಪ್ರಕರಣದ ತೀರ್ಪು ಪ್ರಕಟ

ಬೆಳ್ತಂಗಡಿ : ತಾಲೂಕನ್ನೆ ಬೆಚ್ಚಿಬೀಳಿಸಿ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ (17) ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂ.16) ಸಿಬಿಐ ಕೋರ್ಟ್‌ನಲ್ಲಿ ತೀರ್ಪು ಪ್ರಕಟವಾಗಲಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮವತಿ ದಂಪತಿಗಳ ಎರಡನೇ ಮಗಳು ಸೌಜನ್ಯ (17) ಕಾಲೇಜ್ ಮುಗಿಸಿ ಮನೆಗೆ ವಾಪಸ್ ಹೋಗುವಾಗ ಅತ್ಯಾಚಾರವಾಗಿ 2012 ಅಕ್ಟೋಬರ್ 10ರಂದು ಮೃತದೇಹವಾಗಿ ಪತ್ತೆಯಾಗಿದ್ದಳು. ಘಟನೆಗೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್‌ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಊರಿನಲ್ಲಿದ್ದ. ಹಲವಾರು ಹೋರಾಟ ನಡೆದ ಬಳಿಕ ಪ್ರಕರಣವನ್ನು ಸಿಐಡಿಯಿಂದ ಕೇಂದ್ರ ಸಿಬಿಐ ತನಿಖೆ ನಡೆಸಿದ್ದು ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿತ್ತು.

ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್‌ಗೆ ಕಳೆದ 6 ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದ್ದು ಅದರಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಹೀಗಾಗಿ ಪ್ರಕರಣ ನಡೆದು 11 ವರ್ಷಗಳ ಬಳಿಕ ಇಂದು ಸಂಜೆ ಪ್ರಕರಣದ ತೀರ್ಪು ಪ್ರಕಟವಾಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!