ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗರ್ಡಾಡಿ ಬಳಿ ಬೈಕಿಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು: ಹುಟ್ಟು ಹಬ್ಬದ ದಿನವೇ ರಸ್ತೆ ಅಪಘಾತಕ್ಕೆ ಯುವಕ ಬಲಿ..!

ಗರ್ಡಾಡಿ ಬಳಿ ಬೈಕಿಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು: ಹುಟ್ಟು ಹಬ್ಬದ ದಿನವೇ ರಸ್ತೆ ಅಪಘಾತಕ್ಕೆ ಯುವಕ ಬಲಿ..!

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಜೂ 21ರಂದು ಬೆಳಿಗ್ಗೆ ಗರ್ಡಾಡಿ ಬಳಿ ನಡೆದಿದೆ. ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದಿಕ್ಷೀತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಧರ್ಮಸ್ಥಳದಿಂದ ಹುಬ್ಬಳ್ಳಿಗೆ ತೆರಳುತಿದ್ದ ಬಸ್ ಗರ್ಡಾಡಿ ಸಮೀಪದ ನಂದಿಬೆಟ್ಬ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ಸಮಯಗಳ ಹಿಂದೆ ಇದೇ ಜಾಗದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!