ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ, ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ : ಓರ್ವ ಸಾವು - ಮತ್ತೋರ್ವ ಗಂಭೀರ

ಚಾರ್ಮಾಡಿ, ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ : ಓರ್ವ ಸಾವು - ಮತ್ತೋರ್ವ ಗಂಭೀರ

 

 

 

ಬೆಳ್ತಂಗಡಿ :  ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜೂ.5ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಮೂಲಕವಾಗಿ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಚಾರ್ಮಾಡಿ ಕಡೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್‌ನಲ್ಲಿದ್ದ ಬಾಳೆಹೊನ್ನೂರಿನ ಮಹಾಗುಂಡಿ ನಿವಾಸಿ ಇರ್ಫಾನ್(21ವ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಬಾಳೆಹೊನ್ನೂರು ನಿವಾಸಿ ಅವಿನ್ (22ವ) ಗಂಭೀರ ಗಾಯಗೊಂಡಿದ್ದಾರೆ.

ಇವರನ್ನು ಚಾರ್ಮಾಡಿಯ ಸಮಾಜ ಸೇವಕ ಸಿನಾನ್ ತಂಡ ಅಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!