ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ..!

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ..!

 

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯ ನಲ್ಲಿದ್ದು ಅದಿರಾ ನೀರುಮಾರ್ಗದ ಮಂಗಳಾ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತಿದ್ದರು. ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಅದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!