ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜು.08 ಬೆಳ್ತಂಗಡಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಚಿವ ದಿನೇಶ್ ಗುಂಡೂರಾವ್

ಜು.08 ಬೆಳ್ತಂಗಡಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ಲಾಯಿಲ ಜಂಕ್ಷನ್ ಹತ್ತಿರ ಇರುವ ಸಂಗಮ ಸಭಾ ಭವನದಲ್ಲಿ ಜು.08ರಂದು ಜನತಾ ದರ್ಶನ ಕಾರ್ಯಕ್ರಮ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಭಾಗಿಯಾಗಲಿದ್ದಾರೆ. ಜು.7 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿ, ಮರುದಿನ ಬೆಳಗ್ಗೆ 9 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದಾರೆ. ನಂತರ ಮಧ್ಯಾಹ್ನ 03 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಕುಂದು-ಕೊರತೆಯ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!