ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲದ ಆಯಿಲ ಬಳಿ ರಸ್ತೆ ಬದಿಯ ಗುಡ್ಡ ಕುಸಿತ: ರಸ್ತೆ ಕುಸಿಯುವ ಭೀತಿ:30 ಪ.ಪಂಗಡ. ಸೇರಿದಂತೆ 100 ಕ್ಕೂ ಅಧಿಕ ಮನೆಗಳಿಗೆ ಸಂಚಾರಕ್ಕೆ ಸಂಚಕಾರ:

ಲಾಯಿಲದ ಆಯಿಲ ಬಳಿ ರಸ್ತೆ ಬದಿಯ ಗುಡ್ಡ ಕುಸಿತ: ರಸ್ತೆ ಕುಸಿಯುವ ಭೀತಿ:30 ಪ.ಪಂಗಡ. ಸೇರಿದಂತೆ 100 ಕ್ಕೂ ಅಧಿಕ ಮನೆಗಳಿಗೆ ಸಂಚಾರಕ್ಕೆ ಸಂಚಕಾರ:

 

 

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

 

 

 

 

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆಯಲ್ಲಿ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 30 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 100 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.ಇನ್ನೆರಡು ದಿನ  ಮಳೆ ಹೀಗೆಯೇ ಮುಂದುವರಿದ್ದಲ್ಲಿ ರಸ್ತೆ ಸಂಪೂರ್ಣ ಕುಸಿಯುವ ಆತಂಕವನ್ನು ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸುತಿದ್ದಾರೆ.

 

 

 

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!