ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌಜನ್ಯ ಪ್ರಕರಣ:ಮರು ತನಿಖೆಗೆ ಆಗ್ರಹಿಸಿ : ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ ಶಾಸಕ ಹರೀಶ್ ಪೂಂಜ:

ಸೌಜನ್ಯ ಪ್ರಕರಣ:ಮರು ತನಿಖೆಗೆ ಆಗ್ರಹಿಸಿ : ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ: ಕುಮಾರಿ ಸೌಜನ್ಯ  ಅತ್ಯಾಚಾರ  ಹತ್ಯೆ ಪ್ರಕರಣವನ್ನು   ಮರು ತನಿಖೆ ನಡೆಸಿ ಮೃತ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ   ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ   ಮನವಿ ಮಾಡಿದ್ದಾರೆ.

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ 2012 ಅಕ್ಟೋಬರ್ 09 ರಂದು ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಅದರ ವಿಚಾರವಾಗಿ ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ ಸರ್ಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದು ತಮಗೂ ತಿಳಿದ ವಿಚಾರವಾಗಿದೆ. ಅಲ್ಲಿಂದ 2023 ರವರೆಗೂ ನಡೆದ ಸಿಬಿಐ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷ ಮುಕ್ತಿಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿಯ  ಜನತೆಗಿದೆ.

 

 

ಅದ್ದರಿಂದ ನಾಗರೀಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಕುಮಾರಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಮೃತ ಸೌಜನ್ಯಳಿಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಮುಖ್ಯ ಮಂತ್ರಿಗಳಿಗೆ   ಮನವಿಮಾಡಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಜೊತೆಗಿದ್ದರು.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!