ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಕ್ಷೇತ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ:ಬೆಳ್ತಂಗಡಿಯಲ್ಲಿ ಇಂದು ಜನತಾ ದರ್ಶನ ಕಾರ್ಯಕ್ರಮ:ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಚಿವ

ಧರ್ಮಸ್ಥಳ ಕ್ಷೇತ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ:ಬೆಳ್ತಂಗಡಿಯಲ್ಲಿ ಇಂದು ಜನತಾ ದರ್ಶನ ಕಾರ್ಯಕ್ರಮ:ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಚಿವ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿದ್ದಾರೆ.

ಲಾಯಿಲ ಜಂಕ್ಷನ್ ಹತ್ತಿರ ಇರುವ ಸಂಗಮ ಸಭಾ ಭವನದಲ್ಲಿ ಇಂದು (ಜು.08) ಜನತಾ ದರ್ಶನ ಕಾರ್ಯಕ್ರಮದ ನಡೆಯಲಿದ್ದು ಈ ಹಿನ್ನೆಲೆ ಕಾರ್ಯಾಕ್ರಮಕ್ಕೆ ಆಗಮಿಸಿದ ಸಚಿವರು ಧರ್ಮಸ್ಥಳ ಕ್ಷೇತ್ರಕ್ಕೂ ಭೇಟಿ ನೀಡಿದ್ದಾರೆ.‌

ಕ್ಷೇತ್ರದಿಂದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನ ಗುರುದೇವ ಮಠಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ವೃತದಲ್ಲಿರುವ ಕ್ಷೇತ್ರದ ಮಠಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು‌. ಬಳಿಕ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭದಲ್ಲಿ ಭಾಗಿಯಾಗಿದ್ದು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 03 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಬೆಳ್ತಂಗಡಿ ತಾಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಕುಂದು-ಕೊರತೆಯ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!