ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕು| ಸೌಜನ್ಯಾಳ ನ್ಯಾಯಕ್ಕಾಗಿ ತಾಲೂಕಿನಲ್ಲಿ ಭಾರೀ ಆಗ್ರಹ: ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆಯಿಂದ ಸಿಎಂಗೆ ಮನವಿ ಪತ್ರ: ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯ

ಕು| ಸೌಜನ್ಯಾಳ ನ್ಯಾಯಕ್ಕಾಗಿ ತಾಲೂಕಿನಲ್ಲಿ ಭಾರೀ ಆಗ್ರಹ: ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆಯಿಂದ ಸಿಎಂಗೆ ಮನವಿ ಪತ್ರ: ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯ

ಬೆಳ್ತಂಗಡಿ: ವಿದ್ಯಾರ್ಥಿನಿ ಕು.ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಮತ್ತೆ ನ್ಯಾಯಕ್ಕಾಗಿ ಆಗ್ರಹಗಳು ಕೇಳಿ ಬರುತ್ತಿದ್ದು ಇಂದು (ಜು.25) ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಇವರು ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮನವಿ ಪತ್ರದಲ್ಲಿ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಉಜಿರೆ ಪದವಿ ಪೂರ್ವ ಕಾಲೇಜಿನ ನಮ್ಮ ಸಮಾಜದ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳು ಅತ್ಯಾಚಾರಕ್ಕೀಡಾಗಿ ಹೀನಾಯ ರೀತಿಯಲ್ಲಿ ದಿನಾಂಕ: 09-10-2012ರಂದು ಕೊಲೆಯಾಗಿದ್ದು ಈ ಕೃತ್ಯಕ್ಕೆ ಸಂಬಂಧಪಟ್ಟು ಬೆಳ್ತಂಗಡಿ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪ್ರತಿಭಟನೆಗಳು, ಆರೋಪಗಳು ಕಂಡುಬಂದಿದ್ದು ಮುಂದಿನ ತನಿಖೆಗಳನ್ನು ಅಂದಿನ ರಾಜ್ಯ ಸರಕಾರವು ರಾಜ್ಯದ ಸಂಬಂಧಪಟ್ಟ ಇಲಾಖೆಗಳಿಂದ ನಡೆಸಲು ಆದೇಶಿಸಿರುತ್ತದೆ, ಆದರೆ ಈ ಬಗ್ಗೆ ಕುಟುಂಬ ವರ್ಗ ಹಾಗೂ ನಮ್ಮ ಸಮಾಜದ ಬಂಧುಗಳು ಹಾಗೆಯೇ ಸಜ್ಜನ ನಾಗರಿಕರ ಅಕ್ರೋಶಗಳು ಪ್ರತಿಭಟನೆಗಳು ಮುಂದುವರಿದಿದ್ದ ಪರಿಣಾಮವಾಗಿ 2013ನೇ ಇಸವಿಯಲ್ಲಿ ರಾಜ್ಯ ಸರಕಾರ ದೇಶದ ಉನ್ನತ ಸ್ವತಂತ್ರ ಸಂಸ್ಥೆಯಾದ ಸಿಬಿಐ ತನಿಖೆ ನಡೆಸುವಂತೆ ಕೇಳಿಕೊಂಡ ಮೇರೆಗೆ ಸಿಬಿಐ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿ ತನಿಖೆಯನ್ನು ನಡೆಸಿ ಸಂತೋಷ್‌ರಾವ್ ಎಂಬವನನ್ನು ಆರೋಪಿಯನ್ನಾಗಿಸಿ ಬೆಂಗಳೂರಿನ ಸಿಬಿಐ ನ್ಯಾಯಾಲಯದಲ್ಲಿ ಪ್ರಕರಣದ ಬಗ್ಗೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿರುತ್ತದೆ. ತದನಂತರ ಸಿಬಿಐ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲವು ಸದ್ರಿ ಪ್ರಕರಣದಲ್ಲಿ ಸಿಬಿಐ ನವರು ಸಂತೋಷರಾವ್ ಎಂಬುವನನ್ನು ಆರೋಪಿಯನ್ನಾಗಿಸಿರುವ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿ ಸಂತೋಷರಾವ್ ಅತ್ಯಚಾರ ಮಾಡಿ ಕೊಲೆ ಮಾಡಿದುದ್ದನ್ನು ಸಾಕ್ಷ್ಯ ಹಾಗೂ ಪುರಾವೆಗಳಿಂದ ಸಾಬೀತು ಪಡಿಸಲು ಸಿಬಿಐ ವಿಫಲವಾದುದರಿಂದ ಸದ್ರಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಂಕಿತ ಆರೋಪಿ ಸಂತೋಷರಾವ್‌ನನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿರುತ್ತದೆ. ಸದ್ರಿ ಪ್ರಕರಣದ ಬಗ್ಗೆ ಸೌಜನ್ಯಳ ಹೆತ್ತವರು ಹಾಗೂ ಕುಟುಂಬವರ್ಗ ಹಾಗೂ ನಮ್ಮ ಸಮಾಜ ಬಂಧುಗಳು ಈ ಬಗ್ಗೆ ತೀವ್ರ ಅಕ್ರೋಶವನ್ನು ವ್ಯಕ್ತಪಡಿಸಿದ್ದು ಈ ನಿಟ್ಟಿನಲ್ಲಿ ಸಮಾಜದ ಭಾವನೆಗಳಿಗೆ ಸ್ಪಂದಿಸುವುದು ನಮ್ಮ ಸಂಘದ ಜವಾಬ್ದಾರಿ ಹಾಗೂ ಕರ್ತವ್ಯವಿರುವುದರಿಂದ ಹಾಗೂ ಯಾವ ಸಮಾಜದ ಹೆಣ್ಣು ಮಗಳಿಗೂ ಈ ರೀತಿಯ ಹೀನಾಯ ಸಾವು ಬರಬಾರದೆಂಬ ಉದ್ದೇಶದಿಂದಲೂ ಅಪರಾಧಿಗಳನ್ನು ಕಾನೂನಿನ ಅಡಿಯಲ್ಲಿ ತಂದು ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆಯಲ್ಲಿ ವಿಫಲವಾಗಿದೆ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿರುವುದರಿಂದ ನಾವು ಬೆಳ್ತಂಗಡಿ ತಾಲೂಕಿನ ನಮ್ಮ ಎಲ್ಲ ಸಮಾಜದ ಬಂಧುಗಳ ಪರವಾಗಿ ಸದ್ರಿ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ಮರು ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಹೀನಾಯ ರೀತಿಯಿಂದ ಜೀವ ಕಳೆದುಕೊಂಡಿರುವ ಆತ್ಮಕ್ಕೆ, ಹೆತ್ತವರಿಗೆ ಹಾಗೂ ಕುಟುಂಬ ವರ್ಗಕ್ಕೆ ನ್ಯಾಯವನ್ನು ಕೊಡಿಸುವುದರೊಂದಿಗೆ ಸಜ್ಜನ ಸಮಾಜಕ್ಕೆ ನ್ಯಾಯಾವಾದ ಸಂದೇಶವನ್ನು ಒದಗಿಸಬೇಕಾಗಿ ನಾವು ಈ ಮೂಲಕ ಅಗ್ರಹ ಪೂರ್ವಕವಾಗಿ ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!