ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ , ಉಡುಪಿ: ಛಾಯ ಭವನದಲ್ಲಿ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ , ಉಡುಪಿ: ಛಾಯ ಭವನದಲ್ಲಿ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ

 

ಗುರುವಾಯನಕೆರೆ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು, ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ. ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ಜೊತೆಗೆ ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ ಉಡುಪಿ ಜಿಲ್ಲಾ ಅಧ್ಯಕ್ಷ ಆನಂದ.ಎನ್ ಬಂಟ್ವಾಳ ಹೇಳಿದರು.

ಅವರು ಜು.16 ರಂದು ಗುರುವಾಯನಕೆರೆ ಛಾಯ ಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ , ಉಡುಪಿ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಸದಸ್ಯರನ್ನು ಜಿಲ್ಲಾಧ್ಯಕ್ಷರು ಗೌರವಿಸಿದರು. ಜೊತೆಗೆ ಮುಂದಿನ 2 ವರ್ಷದ ಅವಧಿಗೆ ನೂತನ ಅಧ್ಯಕ್ಷ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ್ ಶರ್ಮ ಉಜಿರೆ. ಎಸ್ ಕೆ ಪಿ ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ದೇಶಕ ವಿಲ್ಸನ್ ಬೆಳ್ತಂಗಡಿ, ಜಿಲ್ಲಾ ಪತ್ರಿಕಾ ಮಾದ್ಯಮ ಪ್ರತಿನಿಧಿ ಉಮೇಶ್ ಮದ್ದಡ್ಕ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ.ಪಿ ಸುವರ್ಣ ಬೆಳ್ತಂಗಡಿ, ಗೌರವಾಧ್ಯಕ್ಷ ಕೆ.ಜಿ ಸುಬ್ರಹ್ಮಣ್ಯ ಮಡಂತ್ಯಾರು, ಉಪಾಧ್ಯಕ್ಷೆ ಸಿಲ್ವಿಯ ಬೆಳ್ತಂಗಡಿ, ಕಾರ್ಯದರ್ಶಿ ಹರ್ಷ ಬಳ್ಳಮಂಜ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಜಿಲ್ಲಾ ಉಪಾದ್ಯಕ್ಷ ಲೋಕೇಶ್ ಸುಬ್ರಹ್ಮಣ್ಯ. ಕೋಶಾಧಿಕಾರಿ ನವೀನ್ ರೈ ಪುತ್ತೂರು, ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು, ಸಾಂಸ್ಕ್ರತಿಕ ಕಾರ್ಯದರ್ಶಿ ನವೀನ್ ಕುಮಾರ್ ಕಟೀಲ್ , ಕ್ರೀಡಾ ಕಾರ್ಯದರ್ಶಿ ರಾಜೇಶ್ ಉಳ್ಳಾಲ, ಸಂಘಟನಾ ಕಾರ್ಯದರ್ಶಿ ಜಯಕರ್ ಸಾಲಿಯನ್ ಸುರತ್ಕಲ್, ಜಿಲ್ಲಾ ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್, ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವಲಯದ ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್ ನಾರಾವಿ ಪ್ರಾರ್ಥನೆ ಗೈದು, ಕಾರ್ಯದರ್ಶಿ ಹರ್ಷ ಬಳ್ಳಮಂಜ ವಾರ್ಷಿಕ ವರದಿ ಮಂಡಸಿದರು. ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಲೆಕ್ಕ ಪತ್ರ ಓದಿದರು, ಜಗದೀಶ್ ಜೈನ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!