ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು : 211 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ: ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ

ಬೆಂಗಳೂರು : 211 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ: ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ

ಬೆಳ್ತಂಗಡಿ: ರಾಜ್ಯದ 211 ಪೊಲೀಸ್ ಇನ್ಸ್‌ಪೆಕ್ಟರ್ ( ಸಿವಿಲ್) ಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಾಗೇಶ್ ಕದ್ರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಕೊಡಗು ಜಿಲ್ಲೆಯಲ್ಲಿ ಡಿ.ಸಿ. ಆರ್. ಬಿ ಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ನಾಗೇಶ್ ಕದ್ರಿ ಅವರು ಇದೀಗ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್‌ ಜಾಗಕ್ಕೆ ವರ್ಗಾವಣೆಗೊಂಡಿದ್ದಾರೆ.‌

2016ರಿಂದ 2018 ರವರೆಗೆ ಬೆಳ್ತಂಗಡಿ 2018ರಿಂದ 2020 ರವರೆಗೆ ಉಪ್ಪಿನಂಗಡಿಯ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಂತರ ಮಂಗಳೂರಿನ ಐ.ಜಿ. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು. ಇನ್ನೂ ಬೆಳ್ತಂಗಡಿ ಸರ್ಕಲ್‌‌ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಯಾವುದೇ ಠಾಣೆ ನೀಡದೆ ಬಾಕಿ ಉಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!