ಪ್ರಕರಣ ಕುರಿತು ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಇಡೀ ಪ್ರಕರಣದ ಮರು ತನಿಖೆಗೆ ಬಿಜೆಪಿ ಆಗ್ರಹಿಸುತ್ತದೆ, ಪ್ರಕರಣದ ಹಿಂದೆ ಪ್ರಭಾವಿಗಳು ಯಾರೇ ಇದ್ರು ಮರುತನಿಖೆಯಾಗಬೇಕು. ಕುಟುಂಬದ ಆಗ್ರಹಗಳ ತನಿಖೆ ಆಗಬೇಕು. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ ಎಂದಿದ್ದಾರೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆ.27ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಪ್ರತಿಭಟನೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಮರುದಿನ ಶಾಸಕರ ನಿಯೋಗ ಸಿಎಂಗೆ ಹಾಗೂ ರಾಜ್ಯಪಾಲರಿಗೆ ಮನವಿ ನೀಡಿ ಮರುತನಿಖೆಗೆ ಒತ್ತಾಯಿಸಲಿದ್ದೇವೆ. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.
https://youtu.be/qg4DBhrbQqg
ಪತಿಕಾಗೋಷ್ಠಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಿದ್ದರು.