Home › ಆ.27 ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಸೌಜನ್ಯ ತಾಯಿಗೆ ಆಹ್ವಾನ ನೀಡಿದ ಶಾಸಕ ಹರೀಶ್ ಪೂಂಜ
ಆ.27 ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಸೌಜನ್ಯ ತಾಯಿಗೆ ಆಹ್ವಾನ ನೀಡಿದ ಶಾಸಕ ಹರೀಶ್ ಪೂಂಜ
ONLINE PUDU / Thursday, August 24, 2023
ಬೆಳ್ತಂಗಡಿ: ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆಗಸ್ಟ್ 27 ರಂದು ಬೆಳ್ತಂಗಡಿಯಲ್ಲಿ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟ ಹಮ್ಮಿಕೊಂಡಿದ್ದು, ಈ ಹೋರಾಟದಲ್ಲಿ ಭಾಗಿಯಾಗುವಂತೆ ಶಾಸಕ ಹರೀಶ್ ಪೂಂಜ ಹಾಗೂ ತಂಡ
ಆ.24 ರಂದು ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಕುಸುಮಾವತಿ ಅವರನ್ನು ಆಹ್ವಾನಿಸಿದ್ದಾರೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆ.27ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಪ್ರತಿಭಟನೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಮರುದಿನ ಶಾಸಕರ ನಿಯೋಗ ಸಿಎಂಗೆ ಹಾಗೂ ರಾಜ್ಯಪಾಲರಿಗೆ ಮನವಿ ನೀಡಿ ಮರುತನಿಖೆಗೆ ಒತ್ತಾಯಿಸಲಿದೆ.
ಇದನ್ನೂ ಓದಿ: ಸೌಜನ್ಯ ಪ್ರಕರಣ: ಆ.27ರಂದು ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಸಂಸದ ನಳಿನ್ ಕುಮಾರ್ ಕಟೀಲ್
http://prajaprakasha.com/?p=23701