ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ‍್ಯಾಂಕ್ : ಶ್ರೀಪ್ರಿಯ ಸಾಧನೆಯ ಹಿಂದಿನ ಪರಿಶ್ರಮ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿ

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ‍್ಯಾಂಕ್ : ಶ್ರೀಪ್ರಿಯ ಸಾಧನೆಯ ಹಿಂದಿನ ಪರಿಶ್ರಮ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿ

ಮಂಗಳೂರು : ಮಂಗಳೂರು ಇನ್ಸ್ಟಿಟ್ಯೂಟ್ ಆಫ್  ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ (ಮೈಟ್) ವಿದ್ಯಾರ್ಥಿನಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ‍್ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸುಬ್ರಹ್ಮಣ್ಯ ಭಟ್ ಅವರು ಮಗಳು ಶ್ರೀಪ್ರಿಯ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ನಡೆದ 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪುರಸ್ಕಾರ ಪಡೆದಿದ್ದಾರೆ. ನನ್ನ ಸಾಧನೆಗೆ ಪೋಷಕರು ಮತ್ತು ಕಾಲೇಜಿನ ಬೋಧಕ ವರ್ಗ ಕಾರಣ ಎಂದ ಶ್ರೀಪ್ರಿಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಶ್ರೀಪ್ರಿಯ ಅವರ ಸಾಧನೆಯ ಹಿಂದೆ ಅವರ ಪರಿಶ್ರಮವಿತ್ತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿವರ್ಷ ನಡೆಸುವ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದ ಇವರು ಅತ್ಯಂತ ಹೆಚ್ಚು ಪುನರಾವರ್ತನೆ ಆಗುತ್ತಿದ್ದ ಪ್ರಶ್ನೆಗಳ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಗಮನಹರಿಸುತ್ತಿದ್ದರು. ಮಹತ್ವದ ವಿಷಯಗಳ ಬಗ್ಗೆ ಪ್ರಾಧ್ಯಾಪಕರ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತಿದ್ದರು. ಬರೆದು ಕಲಿಯುವ ಅಭ್ಯಾಸ ರೂಢಿಸಿಕೊಂಡು, ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದ್ದರು. ಅಳದಂಗಡಿಯಿಂದ ಮೂಡುಬಿದಿರೆ ಕಾಲೇಜಿಗೆ ಬೆಳಗ್ಗೆ ಬೇಗ ತೆರಳಬೇಕಾದ್ದರಿಂದ ಆ ಸಮಯದಲ್ಲಿ ಓದಲು ಸಮಯ ಸಿಗುತ್ತಿಲ್ಲದಿದ್ದರೂ ಕಾಲೇಜಿನಿಂದ ವಾಪಸ್ ಬಂದ ನಂತರ ಪ್ರತಿದಿನ ರಾತ್ರಿ 9 ರಿಂದ 11 ಗಂಟೆವರೆಗೆ ಹಾಗೂ ಪರೀಕ್ಷೆ ಸಂದರ್ಭದಲ್ಲಿ ಅಧಿಕ ಸಮಯ ಓದುತ್ತಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!